ಸರ್ದಾರ್ ವಲ್ಲಭಭಾಯ್ ಪಟೇಲ್
(ಅಕ್ಟೋಬರ್ ೩೧, ೧೮೭೫ )
ಉಕ್ಕಿನ ಮನುಷ್ಯ - ಭಾರತದ ಪ್ರಮುಖ ಗಣ್ಯರಲ್ಲಿ ಒಬ್ಬರು, ರಾಜಕೀಯ ಮುತ್ಸದ್ಧಿ. ಇವರು ಗಾಂಧೀಜಿಯವರ ಕೆಳಗೆ ಭಾರತೀಯ ರಾಷ್ಟೀಯ ಕಾಂಗ್ರೆಸ್‌ನ ಮುಖ್ಯ ನಿರ್ವಾಹಕರು ಇವರೇ ಆಗಿದ್ದರು.
ಇವರ ಪ್ರಯತ್ನಗಳಿಂದಲೇ ೧೯೩೭ರ ಮತದಾನದಲ್ಲಿ ಕಾಂಗ್ರೆಸ್ ೧೦೦% ಜಯವನ್ನು ಸಾಧಿಸಿತು. ವಸ್ತುಶಃ ಸರ್ದಾರ್ ಪಟೇಲ್‌ರವರೇ ಕಾಂಗ್ರೆಸ್ ಸದಸ್ಯರಿಂದ ಪ್ರಧಾನಿ ಹುದ್ದೆಗೆ ಬೆಂಬಲಿಸಲ್ಪಟ್ಟಿದ್ದರು.
ಆದರೆ ಗಾಂಧೀಜಿಯವರ ಒತ್ತಾಯದ ಮೇಲೆ ಇವರು ಪ್ರಧಾನಿ ಹುದ್ದೆಗೆ ಹಿಂದಕ್ಕೆ ಸರಿದು ಜವಾಹರ್ ಲಾಲ್ ನೆಹರುರವರಿಗೆ ದಾರಿ ಮಾಡಿಕೊಟ್ಟರು
೧೯೧೮ರಲ್ಲಿ ತಮ್ಮ ಚೆನ್ನಾಗಿ ನಡೆಯುತ್ತಿದ್ದ ವಕೀಲಿ ವೃತ್ತಿ, ಅದರ ಘನತೆ,ಗೌರವ, ದೊಡ್ಡ ಮನೆ,ಸಂಪತ್ತು ಎಲ್ಲವನ್ನೂ ತ್ಯಜಿಸಿ ಸ್ವಾತಂತ್ರ್ಯ ಹೋರಾಟದ ಸರಳ ಜೀವನ, ಕಷ್ಟಕಾರ್ಪಣ್ಯ ಗಳಿಗೆ ತಮ್ಮನ್ನು ಅರ್ಪಿಸಿಕೊಂಡರು.
ಗಾಂಧಿಯವರ ಚಂಪಾರಣ್ಯದ ಸತ್ಯಾಗ್ರಹದ ನಂತರ ಪಟೇಲರಿಗೆ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಜಯ ಗಳಿಸಲು ಗಾಂಧಿ ಸಮರ್ಥರು ಎಂದು ನಂಬಿಕೆಯುಂಟಾಯಿತು.
ಆ ಹಿರಿಯ ವ್ಯಕ್ತಿ ಭಾರತೀಯ ಮೌಲ್ಯಗಳಲ್ಲಿಟ್ಟಿದ್ದ ಶ್ರದ್ಧೆ, ಅತಿ ಸರಳ ಜೀವನ ಇವುಗಳಿಂದ ಆಕರ್ಷಿತರಾದ ಪಟೇಲರು ಗಾಂಧಿಯವರ ಆಪ್ತರಾದರು.
ಪಟೇಲರು ಕಾಂಗ್ರೆಸ್ ಪಕ್ಷ ಸೇರಿದ್ದು ೧೯೧೮ರ ನಂತರ.
ಅವರು ಕಾರ್ಯದರ್ಶಿಯಾಗಿದ್ದ ಗುಜರಾತ್ ಸಭಾ ೧೯೨೦ರಲ್ಲಿ ಗುಜರಾತ್ ಪ್ರದೇಶ ಕಾಂಗ್ರೆಸ್ ಕಮಿಟಿಯಾಗಿ ಬದಲಾಯಿತು. ಅದರ ಅಧ್ಯಕ್ಷರಾಗಿ ನೇಮಕಗೊಂಡ ಅವರು ೧೯೪೭ರವರೆಗೂ ಅಲ್ಲಿ ಸೇವೆ ಸಲ್ಲಿಸಿದರು.
ರಾಜ್ಯದ ಎಲ್ಲೆಡೆಗಳಲ್ಲಿ ಹಿಂದೂ, ಮುಸ್ಲಿಂ ಎನ್ನದೆ, ಬಹುತೇಕ ಪ್ರತಿಯೊಬ್ಬರೂ ಪಟೇಲರ ಪರಿಶ್ರಮ ಮತ್ತು ನಾಯಕತ್ವವನ್ನು ಒಪ್ಪಿಕೊಂಡರು. ಪಟೇಲರು ಈ ಹೋರಾಟವು ಸಂಪೂರ್ಣ ಅಹಿಂಸಾತ್ಮಕವಾಗಿದ್ದು, ಹಳ್ಳಿಗರು ಒಗ್ಗಟ್ಟನ್ನು ಮುರಿಯಬಾರದೆಂದು ಸಾರಿಹೇಳಿದರು. ಪಟೇಲರ ಈ ಕಾರ್ಯದಲ್ಲಿ ರಾಷ್ಟ್ರೀಯವಾದಿಗಳಾದ ಅಬ್ಬಾಸ್ ತ್ಯಾಬ್ಜೀ ಮತ್ತು ಅಹಮದಾಬಾದಿನ ಸಾರಾಭಾಯ್ ಕೈಗೂಡಿಸಿದರು.
ಜಿನ್ನಾ ಮೊದಲಾದ ಪಾಕಿಸ್ತಾನ ನಾಯಕರು ಹಾಗೂ ಬ್ರಿಟೀಷ್ ರ ಬೆಂಬಲದಿಂದ, ಹೈದರಾಬಾದ್ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ನಿಜಾಮ ಘೋಷಿಸಿದ.
ಆತನ ಸೇನೆಗೆ ಅತ್ಯಾಧುನಿಕ ಸಿಡ್ನಿ ಕಾಟನ್ ಬಂದೂಕುಗಳು, ಮದ್ದುಗುಂಡುಗಳನ್ನು ಮತ್ತು ತರಬೇತಿಯನ್ನು ಬ್ರಿಟೀಷ್ ರು ನೀಡಿದರು.ಕಾಸೀಂ ರಜ್ವಿಯಂಬ ಮತಾಂಧ ಮತ್ತು ಉಗ್ರವಾದಿಯ ಮುಂದಾಳುತ್ವದಲ್ಲಿ ಸಾವಿರಾರು ಜನ ರಜಾಕಾರರು, ಹೈದರಾಬಾದ್ ಸಂಸ್ಥಾನದಲ್ಲಿ ಜನಸಾಮಾನ್ಯರ ಮೇಲೆ ಆಕ್ರಮಣ ನೆಡೆಸಿದರು.ಮಹಿಳೆಯರ ಮಾನಭಂಗ, ಮಕ್ಕಳ ಹತ್ಯೆ, ಜನರ ಹತ್ಯೆ ಇವು ಸಾವಿರಾರು ಕಡೆ ನೆಡೆದವು. ಸ್ವಾಮಿ ರಮಾನಂದತೀರ್ಥರ ನೇತೃತ್ವದಲ್ಲಿ ಹೈದರಾಬಾದ್ ಪ್ರಾಂತ್ಯ ವಿಮೋಚನಾ ಹೋರಾಟ ನೆಡೆಯಿತು. ಕರ್ನಾಟಕದಮುಂಡರಗಿಯ ಶಿಬಿರಕ್ಕೆ ಕೇಂದ್ರ ಮಂತ್ರಿ ಗಾಡ್ಗೀಳರನ್ನು ಕಳುಹಿಸಿದ ಪಟೇಲ್ ರು, ಈ ಹೋರಾಟಕ್ಕೆ ಬೆಂಬಲ ನೀಡಿ ಪ್ರೋತ್ಸಾಹಿಸಿದರು.
ಭಾರತ ಹೈದರಾಬಾದು ಮತ್ತು ಜುನಾಘಡಗಳಲ್ಲಿ ಜನಮತಗಣನೆ ಮಾಡಬೇಕು ಎಂಬ ಬೇಡಿಕೆಯನ್ನಿಟ್ಟ ಜಿನ್ನಾರ ಉದ್ದೇಶ, ಮುಂದೆ ಇದೇ ತತ್ವವನ್ನು ಕಾಶ್ಮೀರಕ್ಕೂ ಅನ್ವಯಿಸಬೇಕಾಗುತ್ತದೆ ಹಾಗೂ ಜಿನ್ನಾರ ನಂಬಿದ್ದಂತೆ, ಅಲ್ಲಿಯ ಮುಸ್ಲಿಮ್ ಬಹುಸಂಖ್ಯಾತರು ಪಾಕಿಸ್ತಾನದ ಪರವಾಗಿ ಒಲವು ತೋರಿಸುವರು , ಎಂದಿತ್ತು ಎಂಬ ಅಭಿಪ್ರಾಯವೂ ಇದೆ.
ಗುಜರಾತಿನ ಜನರಿಂದ ಗೌರವಾರ್ಥ 'ಸರ್ದಾರ್' ಎಂಬ ಬಿರುದು ಪಡೆದರು. ಭಾರತದಲ್ಲಿದ್ದ ಪುಟ್ಟ ಪುಟ್ಟ ರಾಜರಿಂದಾಳಲ್ಪಟ್ಟ ರಾಜ್ಯಗಳನ್ನು ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಇವರು 'ಉಕ್ಕಿನ ಮನುಷ್ಯ' ರೆಂದೇ ಅಮರರಾದರು. ಸರ್ದಾರ್ ಪಟೇಲರಿಗೆ ೧೯೯೧ರಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಈ ವಿಶ್ವಚೇತನ ನಮ್ಮನ್ನು ಡಿಸೆಂಬರ್ ೧೫, ೧೯೫೦ರಂದು ಅಗಲಿತು.